ಬೆಂಗಳೂರು, ಜ 03 (DaijiworldNews/MS): ಒಂದೆಡೆ ದೇಶಾದ್ಯಂತ ಒಮಿಕ್ರಾನ್ ರೂಪಾಂತರಿ ಸೇರಿದಂತೆ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೆ ಏರಿಕೆಯಾಗುತ್ತಿರುವುದು 3ನೇ ಅಲೆಯ ಪ್ರವೇಶದ ಮುನ್ಸೂಚನೆ ನೀಡಿದಂತಿದೆ. ಇನ್ನೊಂದೆಡೆ ಕೋವಿಡ್ನಿಂದ ಮಕ್ಕಳಿಗೆ ರಕ್ಷಣೆ ನೀಡುವ ಮಹತ್ವದ ಕ್ರಮದ ಭಾಗವಾಗಿ ಇಂದಿನಿಂದ ಸೋಂಕನ್ನು ಎದುರಿಸುವ ನಿಟ್ಟಿನಲ್ಲಿ ಮಕ್ಕಳಿಗೂ ಲಸಿಕೆ ನೀಡುವ ಸಿದ್ಧತೆ ಆರಂಭಗೊಂಡಿದೆ.
ಇಂದಿನಿಂದ 15ರಿಂದ 18 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನ ನಡೆಯಲಿದೆ. ರಾಜ್ಯ ಮತ್ತು ದೇಶದಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಅಭಿಯಾನಕ್ಕೆ ಹೆಚ್ಚಿನ ಮಹತ್ವ ದೊರೆತಿದೆ.
ರಾಜ್ಯದಲ್ಲಿ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನದ ಭಾಗವಾಗಿ ಬೆಂಗಳೂರಿನ ಭೈರವೇಶ್ವರ ನಗರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ. ಉಳಿದಂತೆ ಜಿಲ್ಲಾಮಟ್ಟದಲ್ಲಿ ಜಿಲ್ಲಾಉಸ್ತುವಾರಿ ಸಚಿವರು ಮತ್ತು ತಾಲ್ಲೂಕು ಮಟ್ಟದಲ್ಲಿ ಶಾಸಕರು ಅಭಿಯಾನ ಉದ್ಘಾಟಿಸಲಿದ್ದಾರೆ.
ಇಂದು ಅಭಿಯಾನಕ್ಕೆ ಚಾಲನೆ ದೊರಕಿದರೂ, ಜ.4ರ ಮಂಗಳವಾರದಂದು ಮಕ್ಕಳಿಗೆ ಪೂರ್ಣಪ್ರಮಾಣದಲ್ಲಿ ಲಸಿಕೆ ವಿತರಣೆ ಪ್ರಾರಂಭವಾಗುವುದು ಜ.3ರಂದು ಸೋಮವಾರ ನಿಗದಿತ ಸ್ಥಳಗಳಲ್ಲಿ ಮಾತ್ರ ಮಕ್ಕಳಿಗೆ ಲಸಿಕೆ ನೀಡಿ ನಾಳೆಯಿಂದ ಶಾಲಾ-ಕಾಲೇಜುಗಳಲ್ಲಿ ಲಸಿಕೆ ಪೂರ್ಣಪ್ರಮಾಣದಲ್ಲಿ ಲಸಿಕೆ ದೊರಕಲಿದೆ .
ರಾಜ್ಯದಲ್ಲಿ ಒಟ್ಟಾರೆ 31.75 ಲಕ್ಷ ವಿದ್ಯಾರ್ಥಿಗಳು ಲಸಿಕೆ ಪಡೆಯಲು ಅರ್ಹತೆ ಹೊಂದಿದ್ದಾರೆ. ಶಿಕ್ಷಣ ಸಂಸ್ಥೆ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗುತ್ತದೆ.