ವಿಶಾಖಪಟ್ಟಣಂ, ಜ. 03 (DaijiworldNews/HR): ಪೊಲೀಸ್ ಅಧಿಕಾರಿಯಂತೆ ನಟಿಸಿದ ವ್ಯಕ್ತಿಯೊಬ್ಬ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಆರೋಪಿಯನ್ನು ವಿ ರಾಮಬಾಬು(35) ಎಂದು ಗುರುತಿಸಲಾಗಿದ್ದು, ಆತನ ವಿರುದ್ದ ಕುರುಪಾಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಆರೋಪಿ ರಾಮಬಾಬು ಪುನರಾವರ್ತಿತ ಅಪರಾಧಿಯಾಗಿದ್ದು, ಆತನ ವಿರುದ್ಧ ಕನಿಷ್ಠ 14 ಪ್ರಕರಣಗಳಿವೆ.
ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಇಬ್ಬರು ಹುಡುಗಿಯರು ತಮ್ಮ ಪುರುಷ ಸ್ನೇಹಿತರೊಂದಿಗೆ ರವಡಾ ಗ್ರಾಮಕ್ಕೆ ಹೋಗಿದ್ದು, ಸ್ಥಳದಲ್ಲಿದ್ದ ಹುಡುಗಿಯರು ಮತ್ತು ಹುಡುಗರನ್ನು ರಾಮಬಾಬು ಗಮನಿಸಿದ್ದಾನೆ. ಅವರ ಫೋಟೋಗಳನ್ನು ಕ್ಲಿಕ್ ಮಾಡಿ ನಂತರ ಆ ಚಿತ್ರಗಳನ್ನು ಶಿಕ್ಷಕರಿಗೆ ಮತ್ತು ಪೋಷಕರಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೇ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿದ್ದಾನೆ.
ಬಳಿಕ ರಾಮಬಾಬು ಹುಡುಗರನ್ನು ಅಲ್ಲಿಂದ ಹೋಗುವಂತೆ ಹೇಳಿ ಅಪ್ರಾಪ್ತ ಬಾಲಕಿಯರನ್ನು ತೋಟಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಯಾರಿಗಾದರೂ ಬಹಿರಂಗಪಡಿಸಿದರೆ ಫೋಟೋಗಳನ್ನು ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದು, ಹಾಸ್ಟೆಲ್ ಗೆ ಹಿಂತಿರುಗಿದ ನಂತರ ಬಾಲಕಿ ತಮ್ಮ ವಾರ್ಡನ್ ಮುಂದೆ ನಡೆದ ಘಟನೆ ಬಗ್ಗೆ ಮಾಹಿತಿ ನೀಡಿದ್ದಾಳೆ.
ಇನ್ನು ಅಪ್ರಾಪ್ತ ಬಾಲಕಿಯರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.