ಶ್ರೀನಗರ, ಜ 03 (DaijiworldNews/HR): ಜಮ್ಮುವಿನ ಅರ್ನಿಯಾ ಸೆಕ್ಟರ್ನಲ್ಲಿನ ಅಂತರರಾಷ್ಟ್ರೀಯ ಗಡಿಯ ಬಳಿ ನುಸುಳುಕೋರನನ್ನು ಹತ್ಯೆಗೈಯಲಾಗಿದೆ ಎಂದು ಬಿಎಸ್ಎಫ್ ಮಾಹಿತಿ ನೀಡಿದೆ.
ಜಮ್ಮುವಿನ ಅರ್ನಿಯಾ ಸೆಕ್ಟರ್ನಲ್ಲಿನಲ್ಲಿ ಪಾಕಿಸ್ತಾನಕ್ಕೆ ಸೇರಿದ ವ್ಯಕ್ತಿಯೊಬ್ಬ ಒಳ ನುಸುಳುವುದಕ್ಕೆ ಪ್ರಯತ್ನಿಸಿದ್ದ ಎಂದು ಬಿಎಸ್ಎಫ್ ಮೂಲಗಳು ತಿಳಿಸಿವೆ.
ಇನ್ನು ಜಮ್ಮು- ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್ನಲ್ಲಿ ಉಗ್ರನನ್ನು ಹತ್ಯೆ ಮಾಡುವ ಮೂಲಕ ಇದೇ ರೀತಿಯ ಒಳನುಸುಳುವಿಕೆಯ ಪ್ರಯತ್ನವನ್ನು ಶನಿವಾರ ಭದ್ರತ ಪಡೆ ವಿಫಲಗೊಳಿಸಿತ್ತು.