ಕೋಲ್ಕತ್ತಾ, ಜ 03 (DaijiworldNews/HR): ದೇಶಾದ್ಯಂತ ಮತ್ತೆ ಕೊರೊನಾ ಸೋಂಕು ಹೆಚ್ಚುವುದರೊಂದಿಗೆ ಓಮೈಕ್ರಾನ್ ಭೀತಿಯು ಉಂಟಾಗಿದ್ದು, ಹಲವು ರಾಜ್ಯಗಳು ಮುನ್ನೆಚ್ಚರಿಕಾ ಕ್ರಮವಾಗಿ ಕಠಿಣ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪಶ್ಚಿಮ ಬಂಗಾಳ ಸರ್ಕಾರವು ಇಂದಿನಿಂದ ಶಾಲೆ, ಕಾಲೇಜು, ಸಿನಿಮಾ ಮಂದಿರ, ಮನರಂಜನಾ ತಾಣ, ಸಲೂನ್, ಸ್ಪಾಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತು ಪಶ್ಚಿಮ ಬಂಗಾಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಹೆಚ್.ಕೆ.ದ್ವಿವೇದಿ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಒಮಿಕ್ರಾನ್ ಹೆಚ್ಚಳ ಹಿನ್ನೆಲೆಯಲ್ಲಿ ಸೋಮವಾರದಿಂದ ಶಾಲಾ, ಕಾಲೇಜು, ಥಿಯೇಟರ್ ಹಾಗೂ ಸಲೂನ್, ಸ್ಪಾಗಳನ್ನು ಬಂದ್ ಮಾಡಲಾಗಿದೆ" ಎಂದು ತಿಳಿಸಿದ್ದಾರೆ.
ಇನ್ನು ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳು ಶೇ. 50 ರಷ್ಟು ಪ್ರಮಾಣದಲ್ಲಿ ನೌಕರರೊಂದಿಗೆ ಕಾರ್ಯನಿರ್ವಹಿಸಲಿದ್ದು, ಇದರೊಂದಿಗೆ ಪಶ್ಚಿಮ ಬಂಗಾಳ ಭಾಗಶಃ ಲಾಕ್ಡೌನ್ ಹಂತಕ್ಕೆ ತಲುಪಿದೆ.
ಕರ್ನಾಟಕ ಸೇರಿದಂತೆ ಅನೇಕ ಕಡೆಗಳಲ್ಲಿ ಈಗಾಗಲೇ ನೈಟ್ ಕರ್ಫ್ಯೂ ಜಾರಿಯಲ್ಲಿದ್ದು, ಜೊತೆಗೆ ದೆಹಲಿ ಸೇರಿ ಕೆಲವಡೆ ಥಿಯೇಟರ್ನಲ್ಲಿ ಶೇ.50 ರಷ್ಟು ಮಾತ್ರ ಆಸನ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ.