ರಾಮನಗರ, ಜ 03 (DaijiworldNews/MS): ರಾಮನಗರ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಗಳ ಉದ್ಘಾಟನೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ಕಾರ್ಯಕ್ರಮದ ವೇದಿಕೆ ಮೇಲೆ ಸಂಸದ ಡಿಕೆ ಸುರೇಶ್ ಅವರು ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ ಅವರ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿತ್ತು , ಇದರ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ರಾಮನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಂದು ಸರ್ಕಾರದ ವತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಹಾಗೂ ನಾಡಪ್ರಭು ಕೆಂಪೇಗೌಡ ಪ್ರತಿಮೆಗಳ ಅನಾವರಣ ಮತ್ತು ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಈ ಅಹಿತಕರ ಘಟನೆ ನಡೆದಿದೆ.
ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ " ರಾಜ್ಯದ ಸಚಿವರಾದ ಡಾ. ಅಶ್ವಥ್ ನಾರಾಯಣ ವೇದಿಕೆಯ ಮೇಲೆ ಭಾಷಣ ಮಾಡುವಾಗ ಅವರತ್ತ ಮುನ್ನುಗ್ಗಿ ಬಂದು ಗೂಂಡಾಗಿರಿ ಪ್ರದರ್ಶಿಸಿದ ಸಂಸದ ಡಿ.ಕೆ ಸುರೇಶ್ ಕುಮಾರ್ ಹಾಗೂ ಕಾಂಗ್ರೆಸ್ ಮುಖಂಡರ ವರ್ತನೆ ಖಂಡನೀಯ. ಇಂತಹ ರಾಜಕೀಯ ಸಂಸ್ಕ್ರತಿ ನಮ್ಮ ರಾಜ್ಯಕ್ಕೆ ಒಳ್ಳೆಯದಲ್ಲ. ರಾಮನಗರ ಕರ್ನಾಟಕದಲ್ಲಿ ಇದೆ ಎನ್ನುವುದು ಕಾಂಗ್ರೆಸ್ಸಿಗರಿಗೆ ನೆನಪಿರಲಿ" ಎಂದು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಸಿಎಂ ಕಾರ್ಯಕ್ರಮದಲ್ಲಿ ಕಾಂಗ್ರೆಸ್ನ ಸ್ಥಳೀಯರ ನಾಯಕರನ್ನು ಕಡೆಗಣಿಸಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿ ವೇದಿಕೆಯಲ್ಲೇ ಗಲಾಟೆ ಮಾಡಿದ್ದರು. ಇದಾದ ಬಳಿಕ ಈ ವೇದಿಕೆ ವಾಗ್ಯುದ್ಧಕ್ಕೆ ಸಿಎಂ ಬೊಮ್ಮಾಯಿ ಅವ್ರ ಬಳಿಕೆ ಕ್ಷಮೆ ಕೇಳಿದ ಡಿ.ಕೆ ಸುರೇಶ್ ನಾನು ವೈಯಕ್ತಿಕವಾಗಿ ಸಿಎಂ ಬಳಿ ಕ್ಷಮೆ ಕೇಳೋಕೆ ಬಯಸುತ್ತೇನೆ. ಆದ್ರೆ, ಒಂದು ಈ ಕ್ಷಮೆ ಸಿಎಂಗೆ ಮಾತ್ರ ಎಂದು ಹೇಳಿ ಸಚಿವ ಅಶ್ವತ್ಥನಾರಾಯಣ್ ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟು ಮಂತ್ರಿಗಳು ಮಂತ್ರಿಗಳ ರೀತಿ ನಡೆದುಕೊಳ್ಳಲಿಲ್ಲ. ಸಚಿವರು ಸವಾಲೆಸೆದು ಕರೆದಾಗ ಸುಮ್ಮನಿರಲು ಆಗಲಿಲ್ಲ " ಎಂದು ಹೇಳಿದರು.
ಸಚಿವರು ಎಲ್ಲವನ್ನೂ ನಾವೇ ಮಾಡಿದ್ದೇವೆಂದು ವೀರಾವೇಷ. ವೇದಿಕೆಯಲ್ಲಿ ವೀರಾವೇಷ ಪ್ರದರ್ಶಿಸಿದಾಗ ಸುಮ್ಮನಿರಲಾಗಲಿಲ್ಲ. ಸಿಎಂ ಸಮ್ಮುಖದಲ್ಲಿಯೇ ವೇದಿಕೆಯಲ್ಲಿ ಅವರಿಗೆ ಉತ್ತರ ಕೊಟ್ಟಿದ್ದೇವೆ' ಎಂದು ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಹೇಳಿದರು.
ಸಚಿವರು ಎಲ್ಲವನ್ನೂ ನಾವೇ ಮಾಡಿದ್ದೇವೆಂದು ವೀರಾವೇಷ. ವೇದಿಕೆಯಲ್ಲಿ ವೀರಾವೇಷ ಪ್ರದರ್ಶಿಸಿದಾಗ ಸುಮ್ಮನಿರಲಾಗಲಿಲ್ಲ. ಸಿಎಂ ಸಮ್ಮುಖದಲ್ಲಿಯೇ ವೇದಿಕೆಯಲ್ಲಿ ಅವರಿಗೆ ಉತ್ತರ ಕೊಟ್ಟಿದ್ದೇವೆ' ಎಂದು ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಹೇಳಿದರು.
ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದ್ದರು. ಈ ವೇಳೆ ಸಚಿವರು ಘೋಷಣೆ ಕೂಗಿದರೆ ಸಾಲದು ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ವೈಯಕ್ತಿಕವಾಗಿ ಅಭಿವೃದ್ಧಿಯಾದರೆ ಸಾಲದು. ಇಲ್ಲಿ ಅಭಿವೃದ್ದಿಯನ್ನು ಯಾರೂ ಮಾಡಿಲ್ಲ. ನಮ್ಮ ಬಿಜೆಪಿ ಪಕ್ಷ ಮಾತ್ರ ಅಭಿವೃದ್ದಿ ಮಾಡುತ್ತಿದೆ ಎಂದು ಸಚಿವ ಅಶ್ವಥ್ ನಾರಾಯಣ ತಮ್ಮ ಭಾಷಣದಲ್ಲಿ ಹೇಳಿದ್ದರು ಈ ಮಾತಿನಿಂದ ಸಿಟ್ಟಾದ ಸಂಸದ ಡಿ.ಕೆ.ಸುರೇಶ್ ಅವರು ಪ್ರಶ್ನಿಸಲು ಅಶ್ವಥ್ ನಾರಾಯಣ ಬಳಿ ಹೋಗಿದ್ದರು. ಈ ಸಂದರ್ಭದ ಸಚಿವ ಅಶ್ವತ್ಥನಾರಾಯಣ ಹಾಗೂ ಸಂಸದ ಡಿ.ಕೆ. ಸುರೇಶ್ ನಡುವೆ ಜಟಾಪಟಿ ನಡೆಯಿತು.