ನವದೆಹಲಿ, ಜ 03 (DaijiworldNews/PY): ಮುಸ್ಲಿಂ ಮಹಿಳೆಯರ ಭಾವಚಿತ್ರಗಳನ್ನು ಬುಲ್ಲಿ ಬಾಯಿ ಆಪ್ಗೆ ಅಪ್ಲೋಡ್ ಮಾಡಿ, ಹರಾಜಿಗಿಟ್ಟು, ಕಿರುಕುಳ ಮತ್ತು ಅವಮಾನ ಮಾಡಲು ಪ್ರಯತ್ನಿಸುತ್ತಿರುವ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಿ ಆಪ್ಗೆ ನಿರ್ಬಂಧ ಹೇರಲಾಗಿದೆ.
ಸಾಂದರ್ಭಿಕ ಚಿತ್ರ
ಜನವರಿ 1 ರಂದು ಹುಟ್ಟಿಕೊಂಡ 'ಬುಲ್ಲಿ ಬಾಯಿ' ವಿವಾದವು ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿರುವ ಕೆಲವು ಪ್ರಭಾವಿ ಮಹಿಳೆಯರು ಹಾಗೂ ವಿಶೇಷವಾಗಿ ಮುಸ್ಲಿಂ ಸಮುದಾಯದಿಂದ, ಗಿಟ್ಹಬ್ ವೇದಿಕೆಯಲ್ಲಿ ಆನ್ಲೈನ್ನಲ್ಲಿ ಮಾರಾಟಕ್ಕೆ ತಮ್ಮ ಫೋಟೋಗಳನ್ನು ಅಪ್ಲೋಡ್ ಮಾಡಲಾಗಿದೆ ಎಂದು ದೂರು ನೀಡಲಾಗಿದೆ.
ತಮ್ಮನ್ನು ಗುರಿಯಾಗಿಸಿಕೊಂಡು ವೆಬ್ಸೈಟ್ನಲ್ಲಿ ತಮ್ಮ ಫೋಟೋವನ್ನು ಅಪ್ಲೋಡ್ ಮಾಡಲಾಗಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿವ ಸೇನಾ ಸಂಸದೆ ಪ್ರಿಯಾಂಕ ಚತುರ್ವೇದಿ ಶನಿವಾರ ಆಗ್ರಹಿಸಿದ್ದರು.