ಮುಂಬೈ, ಜ 03 (DaijiworldNews/HR): ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಮುಂಬೈನಲ್ಲಿರುವ ಶಾಲೆಗಳು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲ್ಪಟ್ಟಿವೆ ಎಂದು ಮುಂಬೈ ಬಿಎಂಸಿ ಮುಖ್ಯಸ್ಥ ಇಕ್ಬಾಲ್ ಚಹಲ್ ಘೋಷಣೆ ಮಾಡಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಬಿಎಂಸಿ ಕಚೇರಿ, "ಮಹಾರಾಷ್ಟ್ರ ಕೊರೊನಾ ಪ್ರಕರಣಗಳು ಏರಿಕೆ ಹಿನ್ನೆಲೆಯಲ್ಲಿ ಜನವರಿ 31ರವರೆಗೆ ಶಾಲೆಗಳು ಮುಚ್ಚಲ್ಪಡುತ್ತವೆ. 10 ಮತ್ತು 12ನೇ ತರಗತಿಗಳ ವಿದ್ಯಾರ್ಥಿಗಳಿಗೆ ತರಗತಿಗಳು ಮುಂದುವರಿಯುತ್ತವೆ" ಎಂದಿದೆ.
ಇನ್ನು "ಅನೇಕ "ಖಾಸಗಿ ಶಾಲೆಗಳು ಮುಚ್ಚುತ್ತಿದ್ದು, ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ" ಎಂದು ಮಾಹಿತಿ ನೀಡಿದೆ.