ಬೆಂಗಳೂರು, ಜ. ೦3 (DaijiworldNews/SM): ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳ ಏರಿಕೆಯಾಗಿವೆ. ರಾಜ್ಯದಲ್ಲಿ ಸೋಮವಾರದಂದು ಒಟ್ಟು 1,290 ಹೊಸ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 30,10, 847ಕ್ಕೆ ಏರಿಕೆಯಾಗಿದೆ.
ಇನ್ನು ಸೋಮವಾರದಂದು 232 ಸೋಂಕಿತರು ಗುಣಮುಖರಾಗಿದ್ದಾರೆ. ಅಲ್ಲದೆ, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 29,61,122ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 11,345 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿನಿಂದ ಇಂದು ಐವರು ಸಾವನ್ನಪ್ಪಿದ್ದಾರೆ.