ನವದೆಹಲಿ, ಜ 04 (DaijiworldNews/MS): ಒಂದೆಡೆ ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಹಾಗೂ ರೂಪಾಂತರಿ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಈ ನಡುವೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೂ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಸಿಎಂ ಕೇಜ್ರಿವಾಲ್ ಅವರು ತಮಗೆ ಸೋಂಕು ತಗುಲಿರುವುದನ್ನು ಟ್ವಿಟರ್ ಮೂಲಕ ಧೃಡಪಡಿಸಿದ್ದಾರೆ. ಮಂಗಳವಾರ ಬೆಳಗ್ಗೆ ಟ್ವೀಟ್ ಮಾಡಿದ್ದು, " ಕೋವಿಡ್ ಸೌಮ್ಯ ರೋಗಲಕ್ಷಣಗಳನ್ನು ಹೊಂದಿದ್ದು, ತನ್ನನ್ನು ತಾನು ಪ್ರತ್ಯೇಕಿಸಿಕೊಂಡಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು, ದಯವಿಟ್ಟು ನಿಮ್ಮನ್ನು ಪ್ರತ್ಯೇಕಿಸಿ ಮತ್ತು ಪರೀಕ್ಷಿಸಿಕೊಳ್ಳಿ" ಎಂದು ಬರೆದುಕೊಂಡಿದ್ದಾರೆ.
ಗೋವಾ ಮತ್ತು ಪಂಜಾಬ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಪ್ರಚಾರಕ್ಕಾಗಿ ಅಮ್ ಆದ್ಮಿ ಪಕ್ಷದ ಮುಖ್ಯಸ್ಥರಾಗಿರುವ ರಾಜ್ಯಗಳಿಗೆ ಅನೇಕ ಪ್ರವಾಸಗಳನ್ನು ಕೈಗೊಂಡಿದ್ದಾರೆ. ಎಎಪಿ ಎರಡೂ ಚುನಾವಣೆಗಳಲ್ಲಿ ಪ್ರಬಲ ಪಕ್ಷವಾಗಿ ಹೊರಹೊಮ್ಮಲು ಪ್ರಯತ್ನಿಸುತ್ತಿದೆ.