ನವದೆಹಲಿ, ಜ 04 (DaijiworldaNews/HR): ಮುಸ್ಲಿಂ ಮಹಿಳೆಯರ ಭಾವಚಿತ್ರಗಳನ್ನು 'ಬುಲ್ಲಿ ಬಾಯಿ' ಆಪ್ಗೆ ಅಪ್ಲೋಡ್ ಮಾಡಿ, ಹರಾಜಿಗಿಟ್ಟು, ಕಿರುಕುಳ ಮತ್ತು ಅವಮಾನ ಮಾಡಲು ಪ್ರಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಬಂಧಿತನಾಗಿರುವ ಶಂಕಿತನ ಗುರುತನ್ನು ಮುಂಬೈ ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.
ಇನ್ನು ಅಪರಿಚಿತ ಅಪರಾಧಿಗಳ ವಿರುದ್ಧ ಐಪಿಸಿ ಮತ್ತು ಐಟಿ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಲೈನ್ನಲ್ಲಿ ಮುಸ್ಲಿಂ ಸಮುದಾಯದ ಸಾವಿರಾರು ಮಹಿಳೆಯರ ಫೋಟೋಗಳನ್ನು ಮಾರಾಟ ಮಾಡಿದ 'ಬುಲ್ಲಿ ಬಾಯಿ' ಎಂಬ ಆಪ್ ಅನ್ನು ಬ್ಲಾಕ್ ಮಾಡಲಾಗಿದ್ದು, ಈ ಬಗ್ಗೆ ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಭಾನುವಾರ ತಿಳಿಸಿದ್ದರು.