ಪಂಜಾಬ್, ಜ 04 (DaijiworldNews/AN): ದೇಶದಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಸೋಂಕಿನ ಪರಿಣಾಮದ ಮುಂಜಾಗ್ರತಾ ಕ್ರಮವಾಗಿ ರಾಜ್ಯದಾದ್ಯಂತ ನೈಟ್ ಕರ್ಫ್ಯೂವನ್ನು ವಿಧಿಸಲಾಗಿದ್ದು, ಈ ನಿಟ್ಟಿನಲ್ಲಿ ಪಂಜಾಬ್ ನಲ್ಲಿ ಇಂದಿನಿಂದ ರಾತ್ರಿ 10ರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂವನ್ನು ಜಾರಿ ಮಾಡಲಾಗಿದೆ.
ನಿನ್ನೆ ಹೊಸ ಪ್ರಕರಣಗಳು 419 ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 1741ಕ್ಕೆ ಏರಿಕೆಯಾಗಿದೆ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿರುವ ಸರ್ಕಾರವು ಜಿಲ್ಲೆಯ ಎಲ್ಲಾ ಅಧಿಕಾರಿಗಳು ಜಾಗರೂಕತೆಯಿಂದ ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸುವಂತೆ ಆದೇಶಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಎಲ್ಲಾ ಕ್ರಮಗಳನ್ನು ಪಾಲಿಸುವಂತೆ ಆದೇಶದಲ್ಲಿ ತಿಳಿಸಿದೆ. ಸರ್ಕಾರದ ಮುಂದಿನ ಆದೇಶದವರೆಗೆ ಈ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.