ಪಾಟ್ನಾ, ಜ 04 (DaijiworldaNews/HR): ಟ್ರಕ್ವೊಂದು ನಿಯಂತ್ರಣ ತಪ್ಪಿ ಪೊಲೀಸ್ ವಾಹನದ ಮೇಲೆ ಪಲ್ಟಿಯಾಗಿ ಮೂವರು ಪೊಲೀಸರು ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ಬಿಹಾರದ ರಾಜಧಾನಿ ಪಾಟ್ನಾದ ದಾನಪುರ ಪ್ರದೇಶದಲ್ಲಿ ನಡೆದಿದೆ.
ಪೊಲೀಸ್ ವಾಹನದ ಮೇಲೆ ಟ್ರಕ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಶಾಮಕ ದಳ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದೆ.
ಇನ್ನು ಈ ಘಟನೆಯಲ್ಲಿ ಮೂವರು ಪೊಲೀಸರು ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿದ್ದಾರೆ ಎಂದು ಟ್ರೈನಿ ಉಪ ಪೊಲೀಸ್ ಅಧೀಕ್ಷಕ ಪ್ರಾಂಜಲ್ ತ್ರಿಪಾಠಿ ಹೇಳಿದ್ದಾರೆ.
ಗಾಯಗೊಂಡ ಪೊಲೀಸರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.