ಬೆಂಗಳೂರು, ಜ 04 (DaijiworldNews/PY): "ರಾಜಕೀಯಕ್ಕಾಗಿ ನಾವು ಪಾದಯಾತ್ರೆ ಮಾಡುತ್ತಿಲ್ಲ. ಸೋಂಕು ವ್ಯಾಪಿಸದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಪಾದಯಾತ್ರೆ ನಡೆಸುತ್ತೇವೆ" ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೊರೊನಾ ಹಿನ್ನೆಲೆ ಮೇಕೆದಾಟು ಪಾದಯಾತ್ರೆ ಮುಂದೂಡಬೇಕು ಎನ್ನುವ ಸಚಿವ ಸುಧಾಕರ್ ಮನವಿಗೆ ಪ್ರತಿಕ್ರಿಯೆ ನೀಡಿದ ಅವರು, "ಕೊರೊನಾ ಕಾರಣ ಹೇಳಿ ಪಾದಯಾತ್ರೆ ತಡೆಯುವ ಯತ್ನ ನಡೆಯುತ್ತಿದೆ" ಎಂದು ಆರೋಪಿಸಿದ್ದಾರೆ.
"ಉತ್ತರಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಪಾದಯಾತ್ರೆ ಮಾಡಿಲ್ಲವೇ?. ಅವರಿಗೆ ಒಂದು ಕಾನೂನು ನಮಗೆ ಒಂದು ಕಾನೂನಾ?" ಎಂದು ಕೇಳಿದ್ದಾರೆ.
"ಸೋಂಕು ಹರಡದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕಿತ್ತು. ಇದರಲ್ಲಿ ಸರ್ಕಾರ ವಿಫಲವಾಗಿದೆ" ಎಂದಿದ್ದಾರೆ.