ಶಿವಮೊಗ್ಗ, ಜ 05 (DaijiworldNews/PY): "ಈಗಾಗಲೇ ರಾಜ್ಯದಲ್ಲಿ ಕೊರೊನಾ 3ನೇ ಅಲೆ ಪ್ರಾರಂಭವಾಗಿದೆ" ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ಧಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆರಂಭವಾದ ಕಾರಣ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ" ಎಂದಿದ್ದಾರೆ.
"ಬೆಂಗಳೂರಿನಲ್ಲಿ ದಿನೇ ದಿನೇ 2 ಸಾವಿರಕ್ಕೂ ಅಧಿಕ ಕೋವಿಡ್ ಕೇಸ್ಗಳು ಪತ್ತೆಯಾಗುತ್ತಿವೆ. ಹಾಗಾಗಿ ಬೆಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ" ಎಂದು ತಿಳಿಸಿದ್ದಾರೆ.
"ರಾಜ್ಯ ಸರ್ಕಾರದ ತೀರ್ಮಾನದಲ್ಲಿ ರಾಜಕೀಯ ಉದ್ದೇಶವಿಲ್ಲ. ಇದು ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೂ ಅನ್ವಯವಾಗಲಿದೆ. ಕಾಂಗ್ರೆಸ್ ಪಾದಯಾತ್ರೆಗೆ ಯಾವುದೇ ರೀತಿಯಾದ ಪ್ರತ್ಯೇಕ ವ್ಯವಸ್ಥೆ ಇಲ್ಲ. ಕೇಂದ್ರ ಸರ್ಕಾರ ಹಾಗೂ ತಜ್ಞರ ಸಲಹೆ ಪಡೆದು ಸರ್ಕಾರ ಕ್ರಮ ಕೈಗೊಂಡಿದೆ" ಎಂದಿದ್ದಾರೆ.