ಬೆಂಗಳೂರು, ಜ 05 (DaijiworldNews): ಮೇಕೆದಾಟು ಯೋಜನೆಗಾಗಿ ನಾವು ಪಾದಯಾತ್ರೆ ಮಾಡಿಯೇ ಮಾಡ್ತೇವೆ, ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸಲ್ಲ, ಈ ಪಾದಯಾತ್ರೆ ಜನರ ಒಳಿತಿಗೆ ಹಮ್ಮಿಕೊಂಡಿರುವ ಕಾರ್ಯಕ್ರಮ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೇಕೆದಾಟು ಯೋಜನೆಗಾಗಿ ರಾಜ್ಯ ಕಾಂಗ್ರೆಸ್ ಪಾದಯಾತ್ರೆ ನಡೆಸಲು ನಿರ್ಧರಿಸಿದ ಸಂದರ್ಭದಲ್ಲಿ ರಾಜ್ಯದಲ್ಲಿ ಕೊರೊನಾ ಟಫ್ ರೂಲ್ಸ್ ಜಾರಿಯಾಗಿದ್ದು, ಈ ಕುರಿತು ಸರ್ಕಾರದ ವಿರುದ್ದ ವಾಗ್ದಾಳಿ ನ್ಡೆಸಿರುವ ಅವರು, "ಜನರನ್ನ ಉಳಿಸುವ ಕೆಲಸ ಮಾಡುತ್ತಿದ್ದೇವೆ, ನಮ್ಮ ಪಾದಯಾತ್ರೆಯಿಂದ ಯಾರಿಗೂ ತೊಂದರೆಯಾಗಲ್ಲ. ಪಾದಯಾತ್ರೆ ನಿಲ್ಲಿಸಲು ರಾಜ್ಯ ಸರ್ಕಾರ ಟಫ್ ರೂಲ್ಸ್ ಜಾರಿ ಮಾಡಿದೆಯ? ಎಂದು ಪ್ರಶ್ನಿಸಿದ್ದಾರೆ.
ಇನ್ನು ಇದೇ ಜನವರಿ 9 ರಿಂದ ಕನಕಪುರ ತಾಲ್ಲೂಕಿನಿಂದ ಬೆಂಗಳೂರಿಗೆ ಮೇಕೆದಾಟು ಯೋಜನೆಗೆ ಒತ್ತಾಯಿಸಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಪಾದಯಾತ್ರೆಯಲ್ಲಿ ಎಲ್ಲಾ ಜಿಲ್ಲೆಗಳ ಪಕ್ಷದ ಕಾರ್ಯಕರ್ತರು ಸೇರಿದಂತೆ 7 ಸಾವಿರ ಜನ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.