ತಮಿಳುನಾಡು, ಜ 05 (DaijiworldNews/AN): ದೇಶದಾದ್ಯಂತ ಕೊರೋನ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರವು ಭಾನುವಾರದಂದು ಸಂಪೂರ್ಣ ಲಾಕ್ಡೌನ್ ಘೋಷಿಸಿದ್ದು, ಗುರುವಾರದಿಂದ ನೈಟ್ ಕರ್ಫ್ಯೂವನ್ನು ಜಾರಿಗೆ ತಂದಿದೆ.
ಚೆನ್ನೈ ಸೇರಿದಂತೆ ಐದು ಜಿಲ್ಲೆಗಳಲ್ಲಿ ಮಂಗಳವಾರ ಹೆಚ್ಚಿನ ಪ್ರಮಾಣದಲ್ಲಿ ಹೊಸ ಕೊರೋನ ವೈರಸ್ ಸೋಂಕುಗಳು ಉಂಟಾಗುತ್ತಿದ್ದು, ತಮಿಳುನಾಡಿನಲ್ಲಿ ಪ್ರಸ್ತುತ 2,731 ಹೊಸ ಪ್ರಕರಣಗಳಿದ್ದು, ಇದು 27,55,587 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.ಈ ಹಿನ್ನೆಲೆಯಲ್ಲಿ ಶನಿವಾರ ಮೆಗಾ ಕೋವಿಡ್-19 ಲಸಿಕೆ ಅಭಿಯಾನ ನಡೆಯಲಿದೆ ಎಂದು ತಮಿಳುನಾಡು ಆರೋಗ್ಯ ಸಚಿವ ಸುಬ್ರಮಣಿಯನ್ ಅವರು ಬುಧವಾರ ತಿಳಿಸಿದ್ದಾರೆ.
ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಗಳು ಎರಡು ಡೋಸ್ ಲಸಿಕೆ ಪಡೆದಿದ್ದರೆ, ಪ್ರತ್ಯೇಕವಾಗಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ 'ಪೊಂಗಲ್' ಸುಗ್ಗಿಯ ಆಚರಣೆ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ ರಾಜ್ಯವು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಾರ್ಯಕ್ರಮಗಳನ್ನು ಮುಂದೂಡಿದೆ.