ಬೆಂಗಳೂರು, ಜ. 05 (DaijiworldNews/SM): ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಮತ್ತೆ ಏರಿಕೆಯಾಗಿವೆ. ಬುಧವಾರ ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿರುವ ಅಂಕಿ ಅಂಶಗಳ ಪ್ರಕಾರ 4246 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವ್ ಪ್ರಮಾಣ ಶೇ. 3.3ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿ ಮತ್ತೆ ಇಬ್ಬರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅತ್ಯಧಿಕ ಪ್ರಕರಣಗಳು ಬೆಂಗಳೂರಿನಲ್ಲಿ ವರದಿಯಾಗಿದ್ದು, 3605 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಪಾಸಿಟಿವ್ ಪ್ರಮಾಣ ಶೇ.6.45ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.