ಬೆಂಗಳೂರು, ಜ 06 (DaijiworldNews/HR): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೊರೊನಾ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈಗಾಗಲೇ ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ಹಾಗೂ ಕೆಲವು ನಿಯಮಗಳನ್ನು ಜಾರಿಗೆ ತರಲಾಗಿದೆ.
ಇನ್ನು ಇಂದಿನ ಸಭೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಕಠಿಣ ನಿಯಮ ಜಾರಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.