ತಿರುವನಂತಪುರಂ, ಜ 06 (DaijiworldNews/HR): ಕೇರಳದ ಕಾರ್ಯಕರ್ತೆ ಬಿಂದು ಅಮ್ಮಿನಿ ಅವರ ಮೇಲೆ ಕೋಝಿಕ್ಕೋಡ್ ಬೀಚ್ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೋಝಿಕ್ಕೋಡ್ ಉತ್ತರ ಬೀಚ್ಗೆ ನ್ಯಾಯಾಲಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಮಿಸಿದಾಗ ಅಪರಿಚಿತ ವ್ಯಕ್ತಿಗಳು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಬಿಂದು ಆರೋಪಿಸಿದ್ದಾರೆ.
ಇನ್ನು ಯಾವುದೇ ಪ್ರಚೋದನೆ ಇಲ್ಲದೇ ಆಕೆಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಕಾರ್ಯಕರ್ತೆ ಆರೋಪಿಸಿದ್ದು, ಆಕೆಯ ದೂರಿನ ಆಧಾರದ ಮೇಲೆ ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಕೋಝಿಕ್ಕೋಡ್ ನಗರ ಪೊಲೀಸರು ತಿಳಿಸಿದ್ದಾರೆ.
ಅಮ್ಮಿನಿ ಅವರು 2019 ರಲ್ಲಿ ಶಬರಿಮಲೆ ದೇಗುಲದಲ್ಲಿ ಎಲ್ಲಾ ವಯೋಮಾನದ ಮಹಿಳೆಯರಿಗೆ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿದ ಸುಪ್ರೀಂ ಕೋರ್ಟ್ ಆದೇಶದ ನಂತರ ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿ ಸುದ್ದಿಯಲ್ಲಿದ್ದರು.