ಬೆಂಗಳೂರು, ಜ 06 (DaijiworldNews/HR): ಕೊರೊನಾ ನಿಯಂತ್ರಣಕ್ಕೆ ತರಲು ರಾಜ್ಯಾದಾದ್ಯಂತ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆಯವರೆಗೆ ವಾರಾಂತ್ಯ ಕರ್ಪ್ಯೂ ಜಾರಿಗೊಳಿಸಲಾಗಿದ್ದು, ಈ ವೇಳೆ ಬಾರ್, ಪಬ್, ಹೋಟೆಲ್, ರೆಸ್ಟೋರೆಂಟ್ ಹಾಗೂ ರೆಸಾರ್ಟ್ ಮುಚ್ಚಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತು ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ರಾಜ್ಯದ ಅನೇಕ ಕಡೆಗಳಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬಾರ್, ಪಬ್, ಹೋಟೆಲ್, ರೆಸ್ಟೋರೆಂಟ್ ಹಾಗೂ ರೆಸಾರ್ಟ್ ಗಳನ್ನು ವೀಕೆಂಡ್ ಕರ್ಪ್ಯೂ ಸಂದರ್ಭದಲ್ಲಿ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಮುಚ್ಚುವಂತೆ ಆದೇಶಿಸಿದ್ದಾರೆ.
ಇನ್ನು ಈ ನಿಯಮವನ್ನು ಜಾರಿಗೊಳಿಸಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು, ಅಲ್ಲದೇ ಈ ಬಗ್ಗೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ತಿಳಿಸಲಾಗಿದೆ.