ನವ ದೆಹಲಿ, ಜ 06 (DaijiworldNews/AN): ಮುಸ್ಲಿಂ ಮಹಿಳೆಯರ ಭಾವಚಿತ್ರಗಳನ್ನು 'ಬುಲ್ಲಿ ಬಾಯಿ' ಆಪ್ಗೆ ಅಪ್ಲೋಡ್ ಮಾಡಿ, ಹರಾಜಿಗಿಟ್ಟು, ಕಿರುಕುಳ ಮತ್ತು ಅವಮಾನ ಮಾಡಲು ಪ್ರಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂನ ನೀರಜ್ ಬಿಷ್ಣೋಯ್ ಎಂಬಾತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಈತ ಭೋಪಾಲ್ನ ವೆಲ್ಲೂರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಬಿ.ಟೆಕ್ ವಿದ್ಯಾರ್ಥಿಯಾಗಿದ್ದು, ಈತನೇ ಈ ಪ್ರಕರಣದ ಪ್ರಮುಖ ಸಂಚುಕೋರ ಹಾಗೂ ಸೃಷ್ಟಿಕರ್ತ ಎಂದು ಪೊಲೀಸರು ತಿಳಿದ್ದಾರೆ.
ದೆಹಲಿ ಪೊಲೀಸರ ವಿಶೇಷ ಐಎಫ್ಎಸ್ಒ ಸೆಲ್ನಲ್ಲಿ ಈತನನ್ನು ಬಂಧಿಸಿದ್ದು, ಆರೋಪಿಯನ್ನು ಇಂದು ದೆಹಲಿಗೆ ಕರೆತರಲಾಗುತ್ತಿದೆ ಎಂದು ಡಿಸಿಪಿ, ಕೆಪಿಎಸ್ ಮಲ್ಹೋತ್ರಾ ತಿಳಿಸಿದ್ದಾರೆ.
ಬುಲ್ಲಿ ಬಾಯಿ ಪ್ರಕರಣದಲ್ಲಿ ಇದು ನಾಲ್ಕನೇ ಬಂಧನವಾಗಿದ್ದು, ಈ ಹಿಂದೆ ಮುಂಬೈ ಪೊಲೀಸರ ಸೈಬರ್ ಸೆಲ್ನಲ್ಲಿ ಮೂವರು ವಿದ್ಯಾರ್ಥಿಗಳಾದ, 21ವರ್ಷದ ಮಯಾಂಕ್ ರಾವಲ್, 19 ವರ್ಷದ ಶ್ವೇತಾ ಸಿಂಗ್ ಮತ್ತು 21 ವರ್ಷದ ವಿಶಾಲ್ ಕುಮಾರ್ ಝಾ ರವರನ್ನು ಬಂಧಿಸಲಾಗಿತ್ತು ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.