ಬೆಂಗಳೂರು, ಜ. 6 (DaijiworldNews/SM): ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಏರಿಕೆಯಾಗಿರುವ ವರದಿಯನ್ನು ಆರೋಗ್ಯ ಇಲಾಖೆ ನೀಡಿದೆ. ಗುರುವಾರ ಪ್ರಕಟಿಸಿದ ವರದಿಯ ಪ್ರಕಾರ ರಾಜ್ಯದಲ್ಲಿ ಹೊಸದಾಗಿ 5031 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
ರಾಜ್ಯದಲ್ಲಿ ಅತ್ಯಧಿಕ ಪ್ರಕರಣಗಳು ಬೆಂಗಳೂರಿನಲ್ಲೇ ವರದಿಯಾಗುತ್ತಿವೆ. ಬೆಂಗಳೂರಿನಲ್ಲಿ ಕೋವಿಡ್-19 ಸೋಂಕು ರಾಜ್ಯದಲ್ಲೇ ಅತಿ ಹೆಚ್ಚಾಗಿದ್ದು ಒಂದೇ ದಿನ 4,324 ಮಂದಿಗೆ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ.
ಈ ಬಗ್ಗೆ ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಪಾಸಿಟಿವಿಟಿ ದರ ಶೇ. 7.5 ರಷ್ಟಿದೆ ಎಂದು ತಿಳಿಸಿದ್ದಾರೆ. ಸಂಖ್ಯೆಗಳ ಹೆಚ್ಚಳದೊಂದಿಗೆ ರಾಜ್ಯದಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇ.3.95 ಕ್ಕೆ ಏರಿಕೆಯಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ಇಂದು 271 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 22173 ಸಕ್ರೀಯ ಪ್ರಕರಣಗಳು ರಾಜ್ಯದಲ್ಲಿವೆ.