ಬೆಂಗಳೂರು, ಜ. ೦6 (DaijiworldNews/SM): ಓಮೈಕ್ರಾನ್, ನಿರ್ಬಂಧಗಳ ನಡುವೆಯೇ 2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ. ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ.
ಮಾರ್ಚ್ 28ರಿಂದ ಆರಂಭಗೊಂಡು ಏಪ್ರಿಲ್ 11ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ ಎಂಬುವುದು ಸದ್ಯ ಬಿಡುಗಡೆಗೊಂಡಿರುವ ತಾತ್ಕಾಲಿಕ ವೇಳಾಪಟ್ಟಿಯಾಗಿದೆ. ಇನ್ನು ಈ ಸಂಬಂಧ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಜನವರಿ 14ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಸಮಯವಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಪರೀಕ್ಷೆಗಳು ನಡೆಯಲಿವೆ. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ವಿವರಿಸಿದೆ.
ಸದ್ಯ ಬಿಡುಗಡೆಗೊಂಡಿರುವ ತಾತ್ಕಾಲಿಕ ಪಟ್ಟಿ ಇಂತಿದೆ:
ಮಾರ್ಚ್ 28ರಂದು ಪ್ರಥಮ ಭಾಷೆ,
ಮಾರ್ಚ್ 30ರಂದು ದ್ವಿತೀಯ ಭಾಷೆ, ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್,
ಏಪ್ರಿಲ್ 4 ಗಣಿತ, ಸಮಾಜಶಾಸ್ತ್ರ,
ಏಪ್ರಿಲ್ 6 ರಂದು ಸಮಾಜ ವಿಜ್ಞಾನ,
ಏಪ್ರಿಲ್ 6 ತೃತೀಯ ಭಾಷೆ,
ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ತಾನಿ ಸಂಗೀತದ ಪರೀಕ್ಷೆ