ಶ್ರೀರಂಗಪಟ್ಟಣ,ಡಿ 07 (DaijiworldNews/MS): ತರಗತಿಗೆ ಮೊಬೈಲ್ ತಂದ ವಿದ್ಯಾರ್ಥಿನಿಯನ್ನು ಮುಖ್ಯಶಿಕ್ಷಕಿ ಕೊಠಡಿಯಲ್ಲಿ ಕೂಡಿಹಾಕಿ ಬಟ್ಟೆ ಬಿಚ್ಚಿಸಿ ಶಿಕ್ಷಿಸಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಎಂಟನೇ ತರಗತಿ ವಿದ್ಯಾರ್ಥಿನಿ, ತರಗತಿಗೆ ಮೊಬೈಲ್ ಮೊಬೈಲ್ ತಂದಿರುವುದು ಗಮನಿಸಿ ವಿದ್ಯಾರ್ಥಿನಿಯನ್ನು ಬೇರೆ ಕೊಠಡಿಗೆ ಕರೆದೊಯ್ದು ಮುಖ್ಯ ಶಿಕ್ಷಕಿ ಸ್ನೇಹಲತಾ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಸಂಜೆ ಮನೆಗೆ ಮರಳಿದ ವಿದ್ಯಾರ್ಥಿನಿ ಪೋಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಪರಿಶೀಲನೆ ನಡೆಸಿದ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸಿದ್ದು, ಮುಖ್ಯ ಶಿಕ್ಷಕಿ ಅಮಾನತು ಮಾಡಲು ಶಿಫಾರಸು ಮಾಡಲಾಗಿದೆ.