ಬೆಂಗಳೂರು, ಜ 07 (DaijiworldNews/PY): ಕಂದಾಯ ಸಚಿವ ಆರ್ ಅಶೋಕ್ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಎರಡು ದಿನ್ ಹಿಂದೆ ಅಶೋಕ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಸಚಿವರೊಂದಿಗೆ ಕಚೇರಿಯಲ್ಲಿ ಕೊರೊನಾ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಕರ್ನಾಟಕದಲ್ಲಿ ಗುರುವಾರ 5,031 ಕೊರೊನಾ ಪ್ರಕರಣಗಳು ದೃಢಪಟ್ಟಿತ್ತು. ಬೆಂಗಳೂರಿನಲ್ಲಿ 4,324 ಪ್ರಕರಣಗಳು ವರದಿಯಾಗಿತ್ತು. 107 ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 333ಕ್ಕೆ ಏರಿಕೆಯಾಗಿದೆ.