ನವದೆಹಲಿ, ಡಿ 08 (DaijiworldNews/MS): ಭಾರತಕ್ಕೂ ಕೊರೊನಾ ಮೂರನೇ ಅಲೆಯನ್ನು ಪ್ರವೇಶವಾಗಿರುವುದನ್ನು ಖಚಿತಪಡಿಸಿವಂತೆ ದೇಶದಲ್ಲಿ ಕೋವಿಡ್ ಸೋಂಕು , ರೂಪಾಂತರಿ ಒಮಿಕ್ರಾನ್ ಡೆಲ್ಟಾ ವೈರಸ್ ಅಬ್ಬರಿಸತೊಡಗಿದ್ದು ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1,41,986 ಹೊಸ ಪ್ರಕರಣಗಳು ಪತ್ತೆಯಾಗಿದ್ದು 285 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಭಾರತದಲ್ಲಿ ಕೋವಿಡ್ ಪಾಸಿಟಿವ್ ರೇಟ್ ಶೇ.9.28 ಕ್ಕೆ ಏರಿಕೆಯಾಗಿದೆ.
ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಒಂದೇ ದಿನ 40,895 ಕೊರೊನಾ ಸೋಂಕಿತರು ಚೇತರಿಸಿಕೊಂಡಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,44,12,740ಕ್ಕೆ ತಲುಪಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,72,169ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 15,13,377 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 68,68,19,128 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 150.06 ಕೋಟಿ ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.