ನವದೆಹಲಿ, ಡಿ 08 (DaijiworldNews/MS): ಭಾರತದ ಕೇಂದ್ರ ಚುನಾವಣಾ ಆಯೋಗವು ಬಹುನಿರೀಕ್ಷಿತ ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕಗಳನ್ನು ಶನಿವಾರ ಪ್ರಕಟಿಸಲಿದೆ.
ಗೋವಾ, ಪಂಜಾಬ್, ಮಣಿಪುರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಲಿದೆ.
ಈ ಬಗ್ಗೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಆಯೋಗವು, " ಗೋವಾ, ಪಂಜಾಬ್, ಮಣಿಪುರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ವಿಧಾನಸಭೆಗಳಿಗೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲು ಭಾರತ ಚುನಾವಣಾ ಆಯೋಗದಿಂದ ಪತ್ರಿಕಾಗೋಷ್ಠಿ ನಡೆಸಲಿದೆ. ಜನವರಿ 8 ರಂದು ಮಧ್ಯಾಹ್ನ 3:30 ಕ್ಕೆ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ" ಎಂದು ಅದು ಹೇಳಿದೆ.
ಚುನಾವಣೆಯ ಎದುರಿಸುವ ರಾಜ್ಯಗಳ ಪೈಕಿ ಗೋವಾ, ಮಣಿಪುರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶ ಸೇರಿದಂತೆ 4 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಮುಂಬರುವ ಚುನಾವಣೆಯಲ್ಲಿ ಗೆಲುವು ದಾಖಲಿಸಲು ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ತಿಂಗಳುಗಟ್ಟಲೆ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.