ನಾಗ್ಪುರ ಜ.08 (DaijiworldNews/AN): ಇಲ್ಲಿನ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಛೇರಿಯ ಮೇಲೆ ಉಗ್ರರು ದಾಳಿ ಮಾಡಲು ಪ್ರಯತ್ನಿಸಿದ ಹಿನ್ನೆಲೆ, ಸ್ಥಳದಲ್ಲಿ ಬಿಗಿ ಭದ್ರತೆಯನ್ನು ವಹಿಸಲಾಗಿದೆ.
ಇತ್ತೀಚೆಗೆ ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಎಂಬಾತ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಕಾರಣದಿಂದಾಗಿ ಆತನನ್ನು ಬಂಧಿಸಲಾಗಿತ್ತು. ಈ ಸಂದರ್ಭದಲ್ಲಿ ಆತನನ್ನು ವಿಚಾರಿಸಿದಾಗ "ನಮ್ಮ ಗುಂಪಿನ ಕೆಲವು ಸದಸ್ಯರು ನಾಗ್ಪುರದ ಆರ್ಎಸ್ಎಸ್ ಕಚೇರಿ ಸಮೀಪ ಭೂಸಮೀಕ್ಷೆ ನಡೆಸುವುದಾಗಿ ಮಾಹಿತಿ ನೀಡಿದ್ದ. ಈ ವಿಚಾರ ತಿಳಿದ ಬೆನ್ನಲ್ಲೇ ಕಚೇರಿ ಸುತ್ತ ಭದ್ರತೆ ಹೆಚ್ಚಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಸಂದರ್ಭದಲ್ಲಿ ಆರ್ಎಸ್ಎಸ್ ಪ್ರಧಾನ ಕಛೇರಿ ಮತ್ತು ರೇಶಿಂಬಾಗ್ನಲ್ಲಿರುವ ಹೆಡ್ಗೆವಾರ್ ಭವನದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಹಾಗೂ ಎರಡೂ ಸ್ಥಳಗಳಲ್ಲಿ ಪರಿಶೀಲನೆ ನಡೆಸಿ ಸುತ್ತಮುತ್ತಲಿನ ಪ್ರದೇಶದಲ್ಲಿ ಹಗಲು-ರಾತ್ರಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ. ಹೀಗಾಗಿ, ನಗರ ಪೊಲೀಸರು ಇದನ್ನು ಗಮನದಲ್ಲಿಟ್ಟುಕೊಂಡು ಈ ಎರಡೂ ಸ್ಥಳಗಳ ಸುತ್ತಲೂ ಫೋಟೋಗ್ರಫಿ ಮತ್ತು ಡ್ರೋನ್ಗಳ ಬಳಕೆಯನ್ನು ನಿಷೇಧಿಸಲಾಗಿದೆ.
ಗಣರಾಜ್ಯೋತ್ಸವ ಮತ್ತು ವಿಧಾನಸಭಾ ಚುನಾವಣೆಯ ಸಮಯದಲ್ಲಿ ಜನನಿಬಿಡ ಸ್ಥಳಗಳು, ಮಾರುಕಟ್ಟೆಗಳು, ಹಾಗೆಯೇ ಉನ್ನತ ಮಟ್ಟದ ರಾಜಕಾರಣಿಗಳು ಮತ್ತು ಭದ್ರತಾ ಪಡೆಗಳ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವ ಸಾಧ್ಯತೆ ಇರುವುದರಿಂದ ಹೆಚ್ಚಿನ ಭದ್ರತೆ ವಹಿಸಲಾಗಿದೆ ಎಂದು ನಾಗ್ಪುರ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ಶುಕ್ರವಾರ ತಿಳಿಸಿದ್ದಾರೆ.