ನವದೆಹಲಿ, ಡಿ 08 (DaijiworldNews/MS): ದೇಶದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸುವ ಸಂದರ್ಭ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುಶೀಲ್ ಜ.೧೫ ರವರೆಗೆ ಚುನಾವಣೆಯ ಹಿನ್ನಲೆಯಲ್ಲಿ ಯಾವುದೇ ರಾಜಕೀಯ ಪಕ್ಷಗಳು ರೋಡ್ ಶೋ , ಪಾದಯಾತ್ರೆ, ರ್ಯಾಲಿ ಮಾಡುವಂತಿಲ್ಲ ಎಂದು ಸೂಚಿಸಿದ್ದಾರೆ.
ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ತಮ್ಮ ಚುನಾವಣಾ ಪ್ರಚಾರವನ್ನು ಸಾಧ್ಯವಾದಷ್ಟು ಡಿಜಿಟಲ್ ಅಥವಾ ವರ್ಚುವಲ್ ನಡೆಸುವಂತೆ ಸಲಹೆ ನೀಡಿದ ಅವರು ಕೋವಿಡ್ ಕಾರಣದಿಂದ ಜನವರಿ 15 ರವರೆಗೆ ಯಾವುದೇ ರೋಡ್ಶೋಗಳು, ಪಾದಯಾತ್ರೆಗಳು, ಸೈಕಲ್ ಅಥವಾ ಬೈಕ್ ರ್ಯಾಲಿಗಳು ಮತ್ತು ಮೆರವಣಿಗೆಗಳನ್ನು ಅನುಮತಿಸಲಾಗುವುದಿಲ್ಲ. ಆ ಬಳಿಕ ಪರಿಸ್ಥಿತಿಯನ್ನು ಪರಿಶೀಲಿಸಿ ಹೊಸ ಸೂಚನೆಗಳನ್ನು ನೀಡಲಾಗುವುದು ಎಂದು ಸುಶೀಲ್ ಚಂದ್ರ ತಿಳಿಸಿದ್ದಾರೆ.