ಬೆಂಗಳೂರು, ಜ. 08 (DaijiworldNews/SM): ಶಾಲಾ ಕಾಲೇಜುಗಳ ಆವರಣದಲ್ಲಿ ಹಾದು ಹೋಗುವ ಅಪಾಯಕಾರಿ ವಿದ್ಯುತ್ ಮಾರ್ಗ ತೆರವುಗೊಳಿಸಲು ಇಲಾಖೆ ನಿರಂತರ ಶ್ರಮಿಸುತ್ತಿದ್ದು, ಪಯಾರ್ಯ ಮಾರ್ಗದ ವ್ಯವಸ್ಥೆಯ ಮೊರೆ ಹೋಗಿದೆ.
ಈ ಬಗ್ಗೆ ಇಂಧನ ಸಚಿವ ವಿ. ಸುನೀಲ್ ಕುಮಾರ್ ಮಾಹಿತಿ ನೀಡಿದ್ದಾರೆ. ಈಗಾಗಲೇ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಬಾಕಿ ಉಳಿದಿರುವ ಮಾರ್ಗಗಳಾನ್ನು ಶೀಘವೇ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕಳೆದ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಧ್ವಜಾರೋಹಣ ನಡೆಸುವಾಗ ಶಾಲಾ ಆವರಣದಲ್ಲಿ ಹಾದು ಹೋಗಿದ್ದ ಅಪಾಯಕಾರಿ ವಿದ್ಯುತ್ ಮಾರ್ಗಕ್ಕೆ ಧ್ವಜ ತಗುಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ತುಮಕೂರು ಹಾಗೂ ಹಾಸನದಲ್ಲಿ ನಡೆದಿತ್ತು.
ಈ ಹಿನ್ನೆಲೆಯಲ್ಲಿ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಚಿವರು, ತುರ್ತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.