ಕನಕಪುರ, ಜ.09 (DaijiworldNews/PY): "ಉದಯಿಸುವ ಸೂರ್ಯ, ಹರಿಯುವ ನೀರನ್ನು ಹೇಗೆ ತಡೆಯಲು ಆಗುವುದಿಲ್ಲವೋ ಹಾಗೆಯೇ ನಮ್ಮ ಪಾದಯಾತ್ರೆಯನ್ನು ತಡೆಯಲು ಸಾಧ್ಯವಿಲ್ಲ" ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಇಂದಿನಿಂದ ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ಪಾದಾಯತ್ರೆಯನ್ನು ಆರಂಭಿಸುತ್ತದೆ. ಕಾಂಗ್ರೆಸ್ ಪಾದಯಾತ್ರೆಗೆ ಕಾಂಗ್ರೆಸ್ ತೊಂದರೆ ನೀಡುತ್ತಿದ್ದಾರೆ. ಅಲ್ಲದೇ, ಪಾದಯಾತ್ರೆಗೆ ಬರುವವರಿಗೆ ಹೆದರಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ.
"ಪಾದಯಾತ್ರೆಗೆ ಬರುವವರನ್ನು ಕೆಲವರು ಕರೆ ಮಾಡಿ ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಪಾದಯಾತ್ರೆಗೆ ಬರುವಂತೆ ಯಾರನ್ನೂ ಒತ್ತಾಯಿಸಿಲ್ಲ. ಯಾರೂ ಬೇಕಾದರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು" ಎಂದಿದ್ದಾರೆ.