ಕನಕಪುರ, ಜ.09 (DaijiworldNews/PY): "ಜನರ ಹಿತದೃಷ್ಟಿಯಿಂದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಮಾಡುತ್ತಿದೆ" ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಜನರ ಹಿತದೃಷ್ಟಿಯಿಂದ ರಾಜ್ಯ ಹಾಗೂ ಬೆಂಗಳೂರಿನ ಜನರಿಗಾಗಿ ಪಾದಯಾತ್ರೆ ಮಾಡಲಾಗುತ್ತಿದೆ. ಈ ಯೋಜನೆಗೂ ತಮಿಳುನಾಡಿಗೂ ಯಾವ ಸಂಬಂಧವೂ ಇಲ್ಲ. ತಮಿಳುನಾಡಿನಿಂದ ಯಾವುದೇ ರೀತಿಯಾದ ಸಮಸ್ಯೆ ಆಗುವುದಿಲ್ಲ. ನಮ್ಮ ಅನುಕೂಲಕ್ಕಾಗಿ ಪೊಲೀಸರನ್ನು ನಿಯೋಜಿಸಲಾಗಿದೆ" ಎಂದಿದ್ಧಾರೆ.
"ನಾವು ಕಾನೂನು ಭಂಗ ಮಾಡುವುದಿಲ್ಲ. ಎರಡು ತಿಂಗಳ ಹಿಂದೆಯೇ ನಾವು ಘೋಷಣೆ ಮಾಡಿದ್ದೇವೆ. ಘೋಷಣೆಯ ಬಳಿಕ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ" ಎಂದು ತಿಳಿಸಿದ್ದಾರೆ.