ರಾಮನಗರ, ಜ.09 (DaijiworldNews/PY): ಮೇಕೆದಾಟು ಯೋಜನೆ ಕಾಮಗಾರಿ ಶೀಘ್ರ ಕಾಮಗಾರಿ ಆರಂಭಕ್ಕೆ ಒತ್ತಾಯಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಗೆ ಮೇಕೆದಾಟು ಸಂಗಮ ಕ್ಷೇತ್ರದಲ್ಲಿ ಗಿಡಕ್ಕೆ ನೀರು ಹಾಕುವ ಹಾಗೂ ಡೋಲು ಬಾರಿಸುವ ಮೂಲಕ ಚಾಲನೆ ನೀಡಲಾಗಿದೆ.
ವಿವಿಧ ಮಠಾಧೀಶರು, ಫಾದರ್ಗಳು, ಮೌಲ್ವಿಗಳು ಗಿಡಕ್ಕೆ ನೀಡು ಹಾಕುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ.
ಕಾಂಗ್ರೆಸ್ ನಾಯಕರಾ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಡೋಲು ಬಾರಿಸುವುದರೊಂದಿಗೆ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ.
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಯೋಜನೆ ಜಾರಿಗೆ ಪಾದಯಾತ್ರೆ ಕೈಗೊಳ್ಳಲಾಗಿದೆ. ಪಕ್ಷದ ನಾಯಕರು, ಜನಪ್ರತಿನಿಧಿಗಳು, ಕಲಾವಿದರಾದ ದುನಿಯಾ ವಿಜಯ್, ಸಾಧುಕೋಕಿಲಾ ಸೇರಿದಂತೆ ಅಪಾರ ಸಂಖ್ಯೆಯ ಜನ ಭಾಗವಹಿಸಿದ್ದಾರೆ.