ನವದೆಹಲಿ ಜ, 09 (DaijiworldNews/AN): ದೇಶದಾದ್ಯಂತ ಒಮಿಕ್ರಾನ್ ಹಾಗೂ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ (ಜ .9) 4.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಈಗಾಗಲೇ ಪ್ರಧಾನಿ ಮೋದಿ ಕೋವಿಡ್ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿದ್ದು, ಕೊರೊನಾ ಮಾರ್ಗಸೂಚಿಗೆ ಸಂಬಂಧಿಸಿದಂತೆ ಹಾಗೂ ತಜ್ಞರ ಸಲಹೆಯಂತೆ ಸೂಕ್ತ ಕ್ರಮಗಳನ್ನು ನೀಡಲಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ಟ್ವೀಟ್ ಮೂಲಕ ತಿಳಿಸಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1.59 ಲಕ್ಷಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಕೊರೊನಾ ದೃಢಪಟ್ಟ ಪ್ರಮಾಣವು ಶೇ.10.21ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 5,90,611ಕ್ಕೆ ತಲುಪಿದೆ.