ಬೆಂಗಳೂರು, ಜ 09 (DaijiworldNews/HR): ಕಾಂಗ್ರೆಸ್ನ ಮೇಕೆದಾಟು ಪಾದಯಾತ್ರೆಯನ್ನು ರಾಜ್ಯ ಸರ್ಕಾರ ತಡೆಯದಿರಲು ನಿರ್ಧಾರಿಸಿದೆ. ಆದರೆ ಕೊರೊನಾ ನಿಯಮಾವಳಿಗಳನ್ನು ಉಲ್ಲಂಘನೆಯ ಮಾಡಿರುವ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸೋದಕ್ಕೆ ನಿರ್ಧಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ಮಹತ್ವದ ಸಚಿವರ ಸಭೆಯನ್ನು ನಡೆಸಲಾಯಿಗಿದ್ದು, ಈ ಸಭೆಯಲ್ಲಿ ಮೇಕೆದಾಟು ಯೋಜನೆ ಅನುಷ್ಠಾನ ಸೇರಿದಂತೆ, ಬೆಂಗಳೂರು ಅಭಿವೃದ್ಧಿಯ ಕುರಿತಂತೆ ಮಹತ್ವದ ಚರ್ಚೆ ನಡೆಸಲಾಗಿದೆ.
ಈ ಕುರಿತು ಮಾತನಾಡಿದ ಸಿಎಂ, "ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನು ತಡೆಯದಿರಲು ನಿರ್ಧರಿಸಲಾಗಿದ್ದು, ಕೊರೋನಾ ನಿಯಮ ಉಲ್ಲಂಘಿಸಿದ್ದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತ ನಿರ್ಧಾರವನ್ನು ಮಾಡಲಾಗಿದೆ" ಎಂದು ಹೇಳಿದ್ದಾರೆ.