ನವದೆಹಲಿ, ಜ.10 (DaijiworldNews/PY): ದೇಶದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,79,723 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 146 ಮಂದಿ ಸೋಂಕಿಗೆ ಸಾವನ್ನಪ್ಪಿದ್ದಾರೆ.
ಇನ್ನು ದೇಶದಲ್ಲಿ 7,23,619 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 46569 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34500172 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ಧಾರೆ.
ಭಾನುವಾರ ದೇಶದಲ್ಲಿ 13,52,717 ಜನರಿಗೆ ಕೊರೊನಾ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 29,60,975 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,51,94,05,951 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.
ಭಾನುವಾರ 1.59 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,55,28,004ಕ್ಕೆ ಏರಿಕೆಯಾಗಿತ್ತು.