ಮುಂಬೈ, ಜ 10 (DaijiworldNews/HR): ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ತಳಕು ಹಾಕಿಕೊಂಡಿರುವ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಾ ಚಕ್ರವರ್ತಿ ಬಳಿಕ ಇದೀಗ ಮತ್ತಿಬ್ಬರು ಆರೋಪಿಗಳ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ನ್ಯಾಯಾಲಯ ಆದೇಶ ನೀಡಿದೆ.
ಕಳೆದ ವರ್ಷ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯ ಸಮಯದಲ್ಲಿ ಹೊರಬಿದ್ದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಾ ಚಕ್ರವರ್ತಿ ಅವರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ಮಾಡಲು ನ್ಯಾಯಾಲಯವು ಆದೇಶಿಸಿದ್ದು, ಇದೀಗ ಅದೇ ಪ್ರಕರಣದ ಇತರ ಇಬ್ಬರು ಆರೋಪಿಗಳ ಖಾತೆಗಳನ್ನು ಸ್ಥಗಿತಗೊಳಿಸುವಂತೆ ನ್ಯಾಯಾಲಯ ಆದೇಶಿಸಿದೆ.
ಜೈ ಮಧೋಕ್ ಮತ್ತು ಜೈದ್ ವಿಲತ್ರಾ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ತಮ್ಮ ಖಾತೆಗಳನ್ನು ಮಾದಕ ವಸ್ತು ನಿಯಂತ್ರಣ ಸಂಸ್ಥೆ(ಎನ್ಸಿಬಿ) ವಶಪಡಿಸಿಕೊಂಡಿದೆ ಎಂದು ತಿಳಿಸಿದ್ದಾರೆ .
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಡಿ.ಬಿ.ಮಾನೆ ಅವರು ಖಾತೆಯನ್ನು ಸ್ಥಗಿತಗೊಳಿಸಲು ಆದೇಶ ಹೊರಡಿಸಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಅವರ ನಿಧನದ ನಂತರ ಕಳೆದ ವರ್ಷ ದಾಖಲಾದ ಪ್ರಕರಣದ ತನಿಖೆಯ ಸಮಯದಲ್ಲಿ ಸ್ಥಗಿತಗೊಂಡಿದ್ದ ತಮ್ಮ ಬ್ಯಾಂಕ್ ಖಾತೆಗಳನ್ನು ಮತ್ತೆ ಕಾರ್ಯನಿರ್ವಹಿಸಲು ರಿಯಾ ಮನವಿ ಮಾಡಿದ್ದರು.
ಷರತ್ತುಗಳನ್ನು ವಿಧಿಸಿ, ವಿಶೇಷ ಎನ್ಡಿಪಿಎಸ್ ನ್ಯಾಯಾಲಯವು ರಿಯಾ ಅವರು ಅಫಿಡವಿಟ್ನಿಂದ ಬೆಂಬಲಿತ ಲಿಖಿತ ಹೇಳಿಕೆಯನ್ನು ನೀಡಬೇಕೆಂದು ಹೇಳಿದ್ದು, ಅಗತ್ಯವಿದ್ದಾಗ ವಿಚಾರಣೆಗೆ ಹಾಜರಾಗುವಂತೆ ಮತ್ತು ಮುಕ್ತಾಯದ ಸಮಯದಲ್ಲಿ ಖಾತೆಗಳಲ್ಲಿ ತೋರಿಸುವಂತೆ ಹೇಳಿದೆ.