ಬೆಂಗಳೂರು, ಜ 10 (DaijiworldNews/HR): ಕಾಂಗ್ರೆಸ್ನ ತ್ರಿಮೂರ್ತಿಗಳ ನಡುವೆ ನಾಯಕರಾಗಲು ಪೈಪೋಟಿ ನಡೆಯುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಚೂಣಿಗೆ ಬರವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಚಿವ ಎಂ.ಬಿ.ಪಾಟೀಲ್ ನಡುವೆ ಪೈಪೋಟಿ ನಡೆಯುತ್ತಿದೆ ಎಂದರು.
ಇನ್ನು ರಾಮನಗರ ಜಿಲ್ಲೆಯ ನೀರಾವರಿ ಯೋಜನೆಗಳ ಬಗ್ಗೆ ಏನು ಮಾಡಿದ್ದಾರೆ? ಎಷ್ಟು ಬಾರಿ ಭೇಟಿ ನೀಡಿದ್ದರು. ಮೇಕೆದಾಟು ಯೋಜನೆಗೆ ಏನೇನು ಮಾಡಿದ್ದರು ಎಂಬುದನ್ನು ಕಾಂಗ್ರೆಸಿಗರು ಬಹಿರಂಗಪಡಿಸಲಿ" ಎಂದಿ ಆಗ್ರಹಿಸಿದ್ದಾರೆ.
ಕಾಂಗ್ರೆಸ್ನವರು ನಡೆಸುತ್ತಿರುವ ಪಾದಯಾತ್ರೆ ಸೆಲ್ ಪ್ರಮೋಷನ್ ಪ್ರೋಗ್ರಾಮ್ ಆಗಿದ್ದು, ಡಿ.ಕೆ.ಶಿವಕುಮಾರ್ ತಮ್ಮ ಪ್ರಮೋಷನ್ಗಾಗಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.