ನವದೆಹಲಿ, ಜ 10 (DaijiworldNews/HR): ದೇಶಾದ್ಯಂತ ಕೊರೊನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇದೀಗ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೂಡ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಜನಾಥ್ ಸಿಂಗ್, ಕೊರೊನಾ ಟೆಸ್ಟ್ ನಲ್ಲಿ ನನಗೆ ಸೋಂಕು ದೃಢಪಟ್ಟಿದ್ದು, ಲಘು ಲಕ್ಷಣಗಳು ಕಂಡುಬಂದಿದೆ. ಹಾಗಾಗಿ ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದೇನೆ" ಎಂದು ತಿಳಿಸಿದ್ದಾರೆ.
ಇನ್ನು ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಹಾಗೂ ಐಸೋಲೇಷನ್ ಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.