ಬೆಂಗಳೂರು, ಜ 10 (DaijiworldNews/HR): ರಾಜ್ಯದಲ್ಲಿ ಮತ್ತೆ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇಂದು ಹೊಸದಾಗಿ 11,698 ಮಂದಿಗೆ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕಳೆದ 24 ಗಂಟೆಯಲ್ಲಿ 1,50,479 ಜನರನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ 11,698 ಮಂದಿಗೆ ಸೋಂಕು ದೃಢಪಟ್ಟಿದೆ.
ಇನ್ನು ರಾಜ್ಯದಲ್ಲಿ 11,698 ಜನರಿಗೆ ಕೊರೋನಾ ದೃಢಪಟ್ಟ ಕಾರಣ ಪಾಸಿಟಿವಿಟಿ ದರ 7.77%ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಇಂದು ನಾಲ್ವರು ಕೊರೊನಾಗೆ ಬಲಿಯಾಗಿದ್ದಾರೆ.
ಬೆಂಗಳೂರಿನಲ್ಲಿ 9,221 ಸೇರಿದಂತೆ ರಾಜ್ಯಾದ್ಯಾಂತ 11,698 ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ ಎಂದು ತಿಳಿಸಿದ್ದಾರೆ.