ಬೆಂಗಳೂರು, ಜ. 10 (DaijiworldNews/SM): ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿಯವರು ಟ್ವೀಟ್ ಮಾಡಿಕೊಂಡಿದ್ದಾರೆ.
ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂಬುವುದಾಗಿ ಟ್ವೀಟ್ ಮಾಡಿದ್ದಾರೆ.