ಬೆಂಗಳೂರು, ಜ. 10 (DaijiworldNews/SM): ರಾಜ್ಯದಲ್ಲಿ ಓಮೈಕ್ರಾನ್ ಪ್ರಕರಣಗಳು ಏರಿಕೆಯಾಗಿವೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ. ಆರೋಗ್ಯ ಇಲಾಖೆಯ ವರದಿ ಪ್ರಕಾರ ಮತ್ತೆ 146 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಒಟ್ಟು ಓಮಿಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ 479ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಉಲ್ಲೇಖಿಸಿದೆ.
ಇಂದಿನ ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ 11,698 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿದುಬಂದಿದೆ. ನಾಲ್ವರು ಕೋವಿಡ್-19 ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಉಲ್ಲೇಖ ಮಾಡಿದೆ.
ಬೆಂಗಳೂರು ಒಂದರಲ್ಲೇ 9,221 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.