ಬೆಂಗಳೂರು, ಜ. 10 (DaijiworldNews/SM): ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಕಡಿಮೆ ಇರುವ ಸ್ಥಳಗಳಲ್ಲಿ ನಿರ್ಬಂಧಗಳನ್ನು ಸಡಿಲಗೊಳಿಸುವ ಯಾವುದೇ ನಿರ್ಧಾರವಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಸಿಎಂ ಪ್ರತಿಕ್ರಿಯೆ ನೀಡಿದ ಅವರು, ನಿಯಮ ಸಡಿಲಿಕೆಯ ಬದಲಿಗೆ ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಅಗತ್ಯವನ್ನು ಸಿಎಂ ಒತ್ತಿ ಹೇಳಿದ್ದಾರೆ. ಸಂಕ್ರಾಂತಿ ವೇಳೆಗೆ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಿಸುವ ಬಗ್ಗೆ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ 6.8 ಇದ್ದು, ಬೆಂಗಳೂರಿನಲ್ಲಿ ಶೇ 10ಕ್ಕೆ ಏರಿಕೆಯಾಗಿದೆ. ಇಡೀ ದೇಶದಲ್ಲಿ ನಾವು ಮೂರನೇ ಸ್ಥಾನದಲ್ಲಿದ್ದೇವೆ. ಇಂತಹ ಪರಿಸ್ಥಿತಿಯಲ್ಲಿ ನಾವು ಹೆಚ್ಚಿನ ಮುಂಜಾಗ್ರತೆ ವಹಿಸುವ ಅಗತ್ಯವಿದೆ ಎಂದರು.