ನವದೆಹಲಿ, ಜ 11 (DaijiworldNews/MS): ಭಾರತದಲ್ಲಿ ಕೋವಿಡ್-19 ಸೋಂಕು ಉಲ್ಬಣವಾಗುತ್ತಿರುವ ಹೊತ್ತಿನಲ್ಲೇ ಓಮಿಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈವರೆಗೂ ದೇಶಾದ್ಯಂತ 4,461 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶಾದ್ಯಂತ ಇರುವ ಒಟ್ಟಾರೆ ಓಮಿಕ್ರಾನ್ ಸೋಂಕಿತರ ಸಂಖ್ಯೆ 4,461ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 1,68,063 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 277 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 484213ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 821446 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 69959 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34570131 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 15,79,928 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 92,07,700 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,52,89,70,294 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.