ಬೆಂಗಳೂರು, ಜ 11 (DaijiworldNews/HR): ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೆ ಇದೀಗ ಅವರ ಪುತ್ರ ಭರತ್ ಬೊಮ್ಮಾಯಿಗೂ ಸೋಂಕು ದೃಢಪಟ್ಟಿದೆ.
ಈ ಕುರಿತು ಭರತ್ ಬೊಮ್ಮಾಯಿ ಟ್ವೀಟ್ ಮಾಡಿದ್ದು, "ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೇವಲ ಸೂಕ್ಷ್ಮ ಲಕ್ಷಣಗಳನ್ನು ಹೊಂದಿದ್ದೇನೆ. ಇದೀಗ ಮನೆಯಲ್ಲಿಯೇ ಐಸೋಲೇಷನ್ನಲ್ಲಿದ್ದೇನೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ದಯವಿಟ್ಟು ಕೊರೊನಾ ಪರೀಕ್ಷೆಗೆ ಒಳಗಾಗಿ" ಎಂದು ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನಿನ್ನೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಂದು ಸಿಎಂ ಬೊಮ್ಮಾಯಿ ಅವರು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು ತಮಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ನಿನ್ನೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದರು. ಸೌಮ್ಯ ಲಕ್ಷಣಗಳು ಇದ್ದದ್ದರಿಂದ ಕೊರೊನಾ ಪರೀಕ್ಷೆ ಮಾಡಿಸಿದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಸ್ವಯಂ ಐಸೊಲೇಟ್ ಆಗಿರುವಂತೆ ತಿಳಿಸಿದ್ದರು