ಮುಂಬೈ, ಜ 11 (DaijiworldNews/HR): ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅನೇಕ ಜನಪ್ರತಿನಿಧಿಗಳು, ನಟ, ನಟಿಯರಿಗೆ ಕೊರೋನಾ ಸೋಂಕು ಈಗಾಗಲೇ ತಗುಲಿದ್ದು, ಇದೀಗ ಈಗ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರಿಗೂ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಇಂದು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಸ್ತುತ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ತುರ್ತು ನಿಗಾ ಘಟಕದಲ್ಲಿ ಲತಾ ಮಂಗೇಶ್ಕರ್ರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.