ಬೆಂಗಳೂರು, ಜ 11 (DaijiworldNews/HR): ನಾನು ತಪ್ಪು ಮಾಡಿದ್ದೇನೆ ಹಾಗಾಗಿ ನನ್ನ ವಿರುದ್ದವೂ ಎಫ್ಐಆರ್ ಹಾಕಿ್ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ.
ಹೊನ್ನಾಳಿ ತಾಲ್ಲೂಕಿನ ಬಲಗುರಿ ಗ್ರಾಮದ ದುರ್ಗಾಂಬಿಕೆ ದೇವಿ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡು ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ರೇಣುಕಾಚಾರ್ಯ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಈ ಬಗ್ಗೆ ಈಗಾಗಲೇ ನಿನ್ನೆ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದ ರೇಣುಕಾಚಾರ್ಯ ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ತಮ್ಮ ವಿರುದ್ಧ ದೂರು ದಾಖಲಿಸುವಂತೆ ಸರ್ಕಾಕ್ಕೆ ಮನವಿ ಮಾಡಿದ್ದಾರೆ.
ಇನ್ನು ಕೊರೊನಾ ನಿಯಂತ್ರಣಕ್ಕಾಗಿ ಇಡೀ ಸರ್ಕಾರವೇ ಶ್ರಮ ಪಡುತ್ತಿದ್ದು, ಇಂತಹ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿ ನಾನು ಉತ್ಸವದಲ್ಲಿ ಭಾಗಿ ಆಗಿದ್ದೆ. ಇದರಿಂದ ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಮುಜುಗರ ಆಗಬಾರದು. ಈ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮತ್ತು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ನನ್ನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬಹುದು ಎಂದು ಹೇಳಿದ್ದಾರೆ.