ನವದೆಹಲಿ, ಜ 12 (DaijiworldNews/MS): ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿದ್ದು, ಕಳೆದ 24 ಗಂಟೆಗಳಲ್ಲಿ 1,94,720 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ನಿನ್ನೆಯ 1.68 ಲಕ್ಷ ಪ್ರಕರಣಗಳಿಗಿಂತ
ಇದು 15.8 ಶೇಕಡಾ ಹೆಚ್ಚಾಗಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶಾದ್ಯಂತ ಇರುವ ಒಟ್ಟಾರೆ ಓಮಿಕ್ರಾನ್ ಸೋಂಕಿತರ ಸಂಖ್ಯೆ 4,868ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 442 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ಇನ್ನು ದೇಶದಲ್ಲಿ 9,55,319 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 60,405 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.