ಬೆಂಗಳೂರು, ಜ.12 (DaijiworldNews/PY): ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಂದು ಮಹತ್ವದ ಸಭೆ ನಡೆಸಲಿದ್ದಾರೆ.
ಬೆಂಗಳೂರಿನ ಸಮಗ್ರ ಶಿಕ್ಷಣ ಕಚೇರಿಯಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಸಚಿವ ಬಿ.ಸಿ.ನಾಗೇಶ್ ಅವರು ಮಹತ್ವದ ಸಭೆ ನಡೆಸಲಿದ್ದು, ಡಿಡಿಪಿಐ ಸೇರಿದಂತೆ ಬಿಇಒ ಹಾಗೂ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ಶಾಲೆಗಳ ಸ್ಥಿತಿಗತಿ ಬಗ್ಗೆ ತಿಳಿದುಕೊಳ್ಳಲು ಸಭೆ ನಡೆಸಲಾಗುತ್ತಿದೆ.
ರಾಜ್ಯದ ಶಾಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಾದಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಿದ್ದಾರೆ.