ಅಸ್ಸಾಂ, ಜ 12 (DaijiworldNews/MS): ಟೋಕಿಯೊ ಒಲಿಂಪಿಕ್ ಕಂಚಿನ ಪದಕ ವಿಜೇತೆ ಲೊವ್ಲಿನಾ ಬೊರ್ಗೊಹೈನ್ ಅವರು ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಲೊವ್ಲಿನಾ ಬೊರ್ಗೊಹೈನ್ ಅವರು ಡಿಸ್ಪುರದ ಜನತಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಅವರಿಂದ ಡಿಎಸ್ಪಿ ಹುದ್ದೆಗೆ ನೇಮಕಾತಿ ಪತ್ರವನ್ನು ಸ್ವೀಕರಿಸಿದ್ದಾರೆ.
ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದ 69 ಕೆ.ಜಿ. ವಿಭಾಗದ ಸೆಮಿಫೈನಲ್ನಲ್ಲಿ ಭಾರತವನ್ನು ಪ್ರತಿನಿಧಿಸಿ ಕಂಚಿನ ಪದಕ ಗೆದ್ದಿದ್ದರು. ಮೇರಿ ಕೋಮ್ ಮತ್ತು ವಿಜೇಂದರ್ ಸಿಂಗ್ ನಂತರ ಕಂಚಿನ ಪದಕ ಗೆದ್ದ ಮೂರನೇ ಭಾರತೀಯ ಬಾಕ್ಸರ್ ಎಂಬ ಹೆಗ್ಗಳಿಕೆಗೆ ಲೋವ್ಲಿನಾ ಬೊರ್ಗೊಹೈನ್ ಪಾತ್ರರಾಗಿದ್ದಾರೆ.